ಕಾಸರಗೋಡು: ಲೋಕಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಅವರು ಕಡಂಬಾರು ಶಾಲೆಯಲ್ಲಿ, ಐಕ್ಯರಂಗ ಅಭ್ಯರ್ಥಿ ರಾಜ್‍ಮೋಹನ್ ಉಣ್ಣಿತ್ತಾನ್ ಪಡನ್ನಕ್ಕಾಡ್ ಶಾಲೆಯಲ್ಲಿ, ಕಾಸರಗೋಡು ಶಾಸಕ ಎನ್.ಎ ನೆಲ್ಲಿಕುನ್ನು ನೆಲ್ಲಿಕುಂಜೆ ಬಾಲಕಿಯರ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆ, ಉದುಮ ಶಾಸಕ ಸಿ.ಎಚ್. ಕುಞಂಬು ಅವರು ಅಣಂಗೂರಿನ ನಗರಸಭಾ ಸರ್ಕಾರಿ ಎಲ್‍ಪಿ ಶಾಲೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ, ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಮತದಾನ ನಡೆಸಿದರು.