ನವದೆಹಲಿ: ಅಮಾನತುಗೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ಮೂವರು ಸಹಚರರನ್ನು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವುದಾಗಿ ಜಾರಿ ನಿರ್ದೆಶನಾಲಯ(ಇ.ಡಿ) ಹೇಳಿದೆ.
ನವದೆಹಲಿ: ಅಮಾನತುಗೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ಮೂವರು ಸಹಚರರನ್ನು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವುದಾಗಿ ಜಾರಿ ನಿರ್ದೆಶನಾಲಯ(ಇ.ಡಿ) ಹೇಳಿದೆ.
ಏಪ್ರಿಲ್ 12ರಂದೇ ಶಿವಪ್ರಸಾದ್ ಹಜ್ರಾ, ಶೇಖ್ ಅಲೊಮ್‌ಗಿರ್, ದಿದರ್ ಬೊಕ್ಷ್ ಮೊಲ್ಲಾ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಇ.ಡಿ ತಿಳಿಸಿದೆ.
ಮತ್ತೊಂದು ಪ್ರಕರಣದಲ್ಲಿ ಕೋಲ್ಕತ್ತದ ಹಣ ಅಕ್ರಮ ವರ್ಗಾವಣೆ ತಡೆ(ಪಿಎಂಎಲ್‌ಎ) ಕಾಯ್ದೆಯಡಿ ರಚನೆಯಾಗಿರುವ ನ್ಯಾಯಾಲಯವು, ಶಹಜಹಾನ್ ಅವರನ್ನು ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಪಡಿತರ ವಿತರಣೆ ಹಗರಣ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿಯಲ್ಲಿ ಶಹಜಹಾನ್‌ಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಲು ತೆರಳುತ್ತಿದ್ದ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳ ಮೇಲೆ ಜನವರಿ 5ರಂದು ನಡೆದ ದಾಳಿ ಸಂಬಂಧ ಅವರನ್ನು ಮಾರ್ಚ್ 30ರಂದು ಬಂಧಿಸಲಾಗಿತ್ತು.
ಬೆದರಿಕೆ, ಕೊಲೆ, ಹತ್ಯೆ ಯತ್ನ, ಸುಲಿಗೆ, ಭೂಮಿ ಅಕ್ರಮವಾಗಿ ವಶಪಡಿಸಿಕೊಂಡ ಆರೋಪಗಳಡಿ ಶಹಜಹಾನ್ ಮತ್ತು ಆತನ ಸಹಚರರ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಆಧರಿಸಿ ಇ.ಡಿ ಮತ್ತೊಂದು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದೆ.
ಆದಿವಾಸಿಗಳು ಮತ್ತು ರೈತರಿಂದ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡು ಮೀನುಗಾರಿಕೆ ನಡೆಸುತ್ತಿರುವ ಆರೋಪ ಶಹಜಹಾನ್ ಮೇಲಿದೆ.