ತಿರುವನಂತಪುರ: ಹೈಕೋರ್ಟ್‍ನ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಅವರನ್ನು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಡುವ ಶಿಫಾರಸಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸಹಿ ಹಾಕಿದ್ದಾರೆ.
ರಾಜ್ಯ ಸರ್ಕಾರದ ಶಿಫಾರಸನ್ನು ತಿರಸ್ಕರಿಸುವಂತೆ ವಿಪಕ್ಷ ನಾಯಕರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.
ಕಳೆದ ಆಗಸ್ಟ್‍ನಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಅವರನ್ನು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಡುವ ಕ್ರಮದಲ್ಲಿ ವಿರೋಧ ಪಕ್ಷದ ನಾಯಕರು ಭಿನ್ನಾಭಿಪ್ರಾಯ ಪತ್ರ ಬರೆದಿದ್ದರು. ವಿವಾದದ ಹಿನ್ನೆಲೆಯಲ್ಲಿ ಏಳು ತಿಂಗಳಾದರೂ ರಾಜ್ಯಪಾಲರು ಶಿಫಾರಸಿಗೆ ಅಂಕಿತ ಹಾಕಿರಲಿಲ್ಲ.
ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿರುವ ಅರ್ಜಿಯಲ್ಲೂ ಶಿಫಾರಸು ಅಂಗೀಕಾರವಾಗದಿರುವ ಅಂಶವನ್ನು ಎತ್ತಿ ತೋರಿಸಲಾಗಿತ್ತು. ಚುನಾವಣಾ ಆಯೋಗದ ಅನುಮೋದನೆಯೊಂದಿಗೆ ಸರ್ಕಾರ ನೇಮಕಾತಿ ಆದೇಶವನ್ನು ಬಿಡುಗಡೆ ಮಾಡುತ್ತದೆ.