HEALTH TIPS

ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ

 ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಗಳ ಪರ ಮತಯಾಚನೆಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ನಗರದಲ್ಲಿ ರವಿವಾರ ಜನಸಾಗರದ ನಡುವೆ ರಾತ್ರಿ ಹೊತ್ತು ರೋಡ್ ಶೋ ನಡೆಸಿದರು.

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎ.26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಚಾರದ ಭಾಗವಾಗಿ ರೋಡ್ ಶೋ ಮೂಲಕ ಮತ ಬೇಟೆಗೆ ಆಗಮಿಸಿದ್ದ ಪ್ರಧಾನಿ ಮೋದಿ ಅವರನ್ನು ಬಿಜೆಪಿಯ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಹರ್ಷೋದ್ಗಾರದೊಂದಿಗೆ ಸ್ವಾಗತಿಸಿದರು.


ಮೈಸೂರಿನಿಂದ ನೇರವಾಗಿ ಮಂಗಳೂರು ವಿಮಾನದ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಕೊನೆಗೆ ನಿರ್ಧಾರವಾಗಿದ್ದ ನಿಗದಿತ ಅವಧಿಗೆ 9 ನಿಮಿಷ ಮುಂಚಿತವಾಗಿ ನಗರದ ಲೇಡಿಹಿಲ್‌ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ವಿಶೇಷ ವಾಹನದಲ್ಲಿ ಆಗಮಿಸಿದ್ದರು. ಸರಿಯಾಗಿ 7.36ಕ್ಕೆ ನಾರಾಯಣ ಗುರು ವೃತ್ತದ ಬಳಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, 7.39ಕ್ಕೆ ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿ ರೋಡ್ ಶೋಗಾಗಿ ಸಿದ್ಧಪಡಿಸಲಾಗಿದ್ದ ವಾಹನ ಏರಿದರು.

ಬಿಳಿ ಬಣ್ಣದ ಕುರ್ತಾದ ಮೇಲೆ ನೀಲಿ ಬಣ್ಣದ ಓವರ್‌ಕೋಟ್ ತಲೆಯಲ್ಲಿ ಕೇಸರಿ ಟೋಪಿ ಧರಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಕೈಯ್ಯಲ್ಲಿ ಕಮಲದ ಚಿಹ್ನೆಯನ್ನು ಹಿಡಿದು ರಸ್ತೆಯುದ್ದಕ್ಕೂ ಸೇರಿದ್ದ ಜನರತ್ತ ಕೈಬೀಸುತ್ತಾ ಸಾಗಿದರು. ಅವರ ಜತೆ ದ.ಕ. ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿದ್ದರು.

ಪುಷ್ಪವೃಷ್ಟಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿಯನ್ನು ಲೇಡಿಹಿಲ್ ವೃತ್ತದಲ್ಲಿ ಸ್ವಾಗತಿಸಲಾದರೆ, ದಾರಿಯುದ್ದಕ್ಕೂ ಹಲವೆಡೆ ಪುಷ್ಪವೃಷ್ಟಿಗೈಯ್ಯಲಾಯಿತು. ಇದಕ್ಕಾಗಿ ಸುಮಾರು 2 ಟನ್ ಹೂವಿನ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ರೋಡ್ ಶೋನ ದಾರಿಯುದ್ದಕ್ಕೂ ಡಬಲ್ ಬ್ಯಾರಿಕೇಡ್ ಗಳ ಅಳವಡಿಸಿ ಭದ್ರತೆ ಒದಗಿಸಲಾಗಿದ್ದರೆ, ಅಲ್ಲಲ್ಲಿ ವೇದಿಕೆಯನ್ನು ಬಿಜೆಪಿ ವತಿಯಿಂದ ರಚನೆ ಮಾಡಲಾಗಿತ್ತು. ವೇದಿಕೆಯಲ್ಲಿ ತುಳುನಾಡಿನ ಸಂಸ್ಕೃತಿ ಯನ್ನು ಬಿಂಬಿಸುವ ಹುಲಿವೇಷ, ಕಂಬಳದ ಪ್ರತಿಕೃತಿ, ಯಕ್ಷಗಾನ, ದೈವಾರಾಧನೆ ವೀಡಿಯೋಗಳನ್ನೂ ಪ್ರದರ್ಶಿಸಲಾಯಿತು. ಮೋದಿ ಮುಖವಾಡ, ತಲೆಯಲ್ಲಿ ಕಮಲದ ಚಿನ್ಹೆಯ ಕೇಸರಿ ಟೋಪಿ, ಹೆಗಲಲ್ಲಿ ಕೇಸರಿ ಶಾಲು ಹೊತ್ತ ಅಭಿಮಾನಿಗಳು, ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ರೋಡ್ ಶೋನ ರಸ್ತೆಯುದ್ದಕ್ಕೂ ನೆರೆದಿದ್ದರು.

ಸಾರ್ವಜನಿಕರಿಗೆ ಅಲ್ಲಲ್ಲಿ ಮಜ್ಜಿಗೆ ವಿತರಣೆ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಸಂಜೆ ಐದೂವರೆಗಾಗಲೆ ರೋಡ್ ಶೋನ ರಸ್ತೆಯಲ್ಲಿ ಜನ ಜಮಾವಣೆ ಆರಂಭ ಗೊಂಡಿತ್ತು. ಎಸ್‌ಪಿಜಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಸಾವಿರಕ್ಕೂ ಅಧಿಕ ಪೊಲೀಸರು ಭದ್ರತೆ ಕಾರ್ಯ ನಿರ್ವಹಿಸಿದರು.

ಮಂತ್ರ ಘೋಷ- ಶಂಖ ನಿನಾದ

ಪ್ರಧಾನಿ ಮೋದಿ ಲೇಡಿಹಿಲ್ ನ ನಾರಾಯಣ ಗುರು ವೃತ್ತದ ಬಳಿ ಆಗಮನಕ್ಕೂ ಮುನ್ನ ವಿಪ್ರರಿಂದ ಮಂತ್ರ ಪಠಣ ಹಾಗೂ ಕೊಂಬು, ಕಹಳೆ, ಚೆಂಡೆ ತಂಡವು ಶಂಖ ನಾದವನ್ನು ಹೊರ ಹೊಮ್ಮಿಸಿತು. ಭಜನೆಯೂ ನಡೆಯಿತು.

ರೋಡ್ ಶೋ ವಾಹನದಲ್ಲಿ ಪ್ರಧಾನಿ ಮೋದಿ ಜೊತೆ ಅಭ್ಯರ್ಥಿಯರು

ರೋಡ್ ಶೋಗಾಗಿ ವ್ಯವಸ್ಥೆ ಮಾಡಲಾಗಿದ್ದ ವಿಶೇಷ ವಾಹನದಲ್ಲಿ ಪ್ರಧಾನಿ ಮೋದಿ ಜೊತೆ ದಕ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಚೌಟ ಮತ್ತು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತ್ರ ಅವಕಾಶ ನೀಡಲಾಗಿದೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries