ಸಮರಸ ಚಿತ್ರಸುದ್ದಿ: ಬದಿಯಡ್ಕ: ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ ಹಾಗೂ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ಸಹಯೋಗದೊಂದಿಗೆ ಎಡನೀರು ಶ್ರೀ ಈಶ್ವರಾನಂದ ಭಾರತೀ ಸ್ವಾಮೀಜಿ ಶಾಲೆಯಲ್ಲಿ ಸೋಮವಾರ ಆರಂಭಗೊಂಡ ಆರು ದಿನಗಳ ಕನ್ನಡ ಸಂಸ್ಕೃತಿ ಶಿಬಿರದಲ್ಲಿ ಯುವ ಸಾಧಕ, ಕೈಗಾರಿಕಾ ವಲಯದಲ್ಲಿ ಜಿಲ್ಲಾಮಟ್ಟದ ಉತ್ಪಾದನಾ ಉದ್ಯಮಿ ಪ್ರಶಸ್ತಿ ಪಡೆದ ಉದ್ಯಮಿ ಮುರಲೀಕೃಷ್ಣ ಕೆ.ಪಿ. ಸ್ಕಂದ ಪ್ಲಾಸ್ಟಿಕ್ಸ್ ಕೋಟೂರು ಅವರನ್ನು ಅಭಿನಂದಿಸಿ ಗೌರವಿಸಲಾಯಿತು.