ಆಲಪ್ಪುಳ: ರಾಜ್ಯದಲ್ಲಿ ಬಿಜೆಪಿಯ ಕೋಮುವಾದಿ ರಾಜಕಾರಣವನ್ನು ಬೇರೂರಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಬಿಜೆಪಿಯು ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಹಾಗೂ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಉದ್ದೇಶದಿಂದಲೇ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ ಎಂದರು.