ಬದಿಯಡ್ಕ : ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕøತಿಕ ಸಂಘದ ವತಿಯಿಂದ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮದಲ್ಲಿ ಗುರುವಾರದಂದು ಪುತ್ತೂರು ಮಹಾಲಿಂಗೇಶ್ವರ ಕ್ಷೇತ್ರದ ಜಾತ್ರೋತ್ಸದ ಸಾಂಸ್ಕøತಿಕ ವೇದಿಕೆಯಲ್ಲಿ ನಡೆಯಿತು.
ಸಂಸ್ಥೆಯ ಕಲಾವಿದರಾದ ಗುರುರಾಜ್ ಕಾಸರಗೋಡು, ಅವನಿ ಎಂ ಎಸ್ ಸುಳ್ಯ, ಜ್ಞಾನ ರೈ ಪುತ್ತೂರು, ಪ್ರಥಮ್ಯ ಯು ವೈ ನೆಲ್ಯಾಡಿ, ಆಜ್ಞಾ ರೈ ಪುತ್ತೂರು, ಶ್ವೇತಾ ಯು ವೈ ನೆಲ್ಯಾಡಿ, ರಕ್ಷಿತಾ ಮೊದಲಾದವರು ಭಾಗವಹಿಸಿದ್ದರು. ಕಾರ್ಯಕ್ರಮದ ಸಾಹಿತ್ಯ ಪ್ರಸ್ತುತಿ ಹಾಗೂ ನಿರೂಪಣೆಯನ್ನು ಡಾ.ವಾಣಿಶ್ರೀ ಕಾಸರಗೋಡು ನಿರ್ವಹಿಸಿದ್ದರು. ಪುತ್ತೂರು ಕ್ಷೇತ್ರದ ವತಿಯಿಂದ ಡಾ.ವಾಣಿಶ್ರೀ ಕಾಸರಗೋಡು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಕಲಾವಿದರಗೂ ಸಂಸ್ಥೆಯ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.