ನವದೆಹಲಿ: ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಠಿ ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಠಿ ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಏಪ್ರಿಲ್ 26ರ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ರಾಹುಲ್ ಗಾಂಧಿ ಈಗಾಗಲೇ ಕೇರಳದ ವಯನಾಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, ಅಲ್ಲಿ ನಾಳೆ ಮತದಾನ ನಡೆಯಲಿದೆ.
ಉತ್ತರ ಪ್ರದೇಶದಲ್ಲಿ ಮಾಡಿಕೊಳ್ಳಲಾಗಿರುವ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಮತ್ತು ಸಮಾಜವಾದಿ ಪಕ್ಷ ಉಳಿದ 63 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.
ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆ ರಾಯ್ ಬರೇಲಿ ಮತ್ತು ಅಮೇಠಿ ಜೊತೆಗೆ ವಾರಾಣಸಿ, ಗಾಜಿಯಾಬಾದ್ ಮತ್ತು ಕಾನ್ಪುರದಲ್ಲೂ ಕಾಂಗ್ರೆಸ್ ಸ್ಪರ್ಧಿಸುತ್ತಿದೆ.
ಅಮೇಠಿಯ ಗೌರಿಗಂಜ್‌ನ ಪಕ್ಷದ ಕಚೇರಿ ಬಳಿ ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ ಪೋಸ್ಟರ್‌ಗಳು ಕಂಡುಬಂದಿದ್ದರಿಂದ ವಾದ್ರಾ ಅವರೇ ಇಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹ ಎದ್ದಿದ್ದವು.
ರಾಯ್ ಬರೇಲಿ ಮತ್ತು ಅಮೇಠಿಯಲ್ಲಿ 5ನೇ ಹಂತದಲ್ಲಿ ಮೇ 20ರಂದು ಮತದಾನ ನಡೆಯಲಿದೆ.