ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಶಕುತುಲ್-ಕೇಶಮುಂಡಿ ಅರಣ್ಯಗಳಲ್ಲಿ ಮಾವೋವಾದಿಗಳ ಮುಖಂಡ ಕವಾಸಿ ಪಂಡಾರು ಹಾಗೂ 15-20 ನಕ್ಸಲರು ಬೀಡುಬಿಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು.
ಒಬ್ಬ ನಕ್ಸಲನ ಮೃತದೇಹ, ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಈ ಮೂಲಕ ಛತ್ತೀಸಗಢದ ಬಸ್ತರ್ ಪ್ರಾಂತ್ಯದಲ್ಲಿ ಈ ವರ್ಷದಲ್ಲಿ 80 ನಕ್ಸಲರನ್ನು ಹತ್ಯೆ ಮಾಡಿದಂತಾಗಿದೆ.