ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಗಳ ಆಯ್ಕೆಗಾಗಿ ನಡೆಯುವ ಪ್ರಾಥಮಿಕ ಸುತ್ತಿನ ಚುನಾವಣೆಗಳಲ್ಲಿ, ಅಧ್ಯಕ್ಷ ಜೋ ಬೈಡನ್ ಹಾಗೂ ಪ್ರತಿಸ್ಪರ್ಧಿ, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ.
ಪಕ್ಷದ ವತಿಯಿಂದ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಯ ಆಯ್ಕೆಗಾಗಿ, ರೋಡ್ ಐಲ್ಯಾಂಡ್, ಕನೆಕ್ಟಿಕಟ್, ನ್ಯೂಯಾರ್ಕ್ ಹಾಗೂ ವಿನ್‌ಕನ್ಸಿನ್ ರಾಜ್ಯಗಳಲ್ಲಿ ಮಂಗಳವಾರ ನಡೆದ ಚುನಾವಣೆಗಳಲ್ಲಿ, ಆಯಾ ಪಕ್ಷಗಳ ನೂರಾರು ಪ್ರತಿನಿಧಿಗಳು ಹಕ್ಕು ಚಲಾಯಿಸಿದರು.
ಅಭ್ಯರ್ಥಿ ಸ್ಥಾನಕ್ಕೆ ಆಯ್ಕೆ ಬಯಸಿ ಹಲವರು ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ, ಡೆಮಾಕ್ರಟಿಕ್ ಪಕ್ಷದ ಬೈಡನ್ ಅವರು ಶೇ 80ಕ್ಕೂ ಅಧಿಕ ಮತ ಪಡೆದರೆ, ಟ್ರಂಪ್ ಅವರು ಶೇ 75ಕ್ಕಿಂತ ಹೆಚ್ಚು ಮತಗಳನ್ನು ಪಡೆದು, ಗೆಲುವಿನ ನಗೆ ಬೀರಿದರು. ನವೆಂಬರ್ 5ರಂದು ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.