ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ವಿಧಿಗಳು ವಿವಿಧ ಕಾರ್ಯಕ್ರಮಗಳೊಂದಿಗೆ ಮುನ್ನಡೆಯುತ್ತಿದ್ದು, ಎರಡನೇ ದಿನ ಸೋಮವಾರ ಬೆಳಗ್ಗೆ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳವರಿಂದ ಗಣಪತಿ ಹೋಮ, ಪ್ರೋಕ್ತ ಹೋಮ, ಪ್ರಾಯಶ್ಚಿತ್ತ ಹೋಮ, ಬಿಂಬ ಶುದ್ಧಿ, ಅಂಕುರ ಪೂಜೆ ನಡೆಯಿತು. ಶ್ರೀ ಅನ್ನಪೂರ್ಣೇಶ್ವರಿ ಭಜನಾ ಸಂಘ ಕುಂಟಿಕಾನ, ಶ್ರೀ ವೀರಾಂಜನೇಯ ಬಾಲಗೋಕುಲ ಏಣಿಯರ್ಪು, ಶ್ರೀ ಕುದ್ರೆಕ್ಕಾಳಿ ಅಮ್ಮ ಭಜನಾ ಸಂಘ ರತ್ನಗಿರಿ, ಶ್ರೀ ಕುಮಾರಸ್ವಾಮಿ ಮಹಿಳಾ ಭಜನಾ ಸಂಘ ಪುತ್ತಿಗೆ, ಶ್ರೀ ಉದನೇಶ್ವರ ಭಕ್ತವೃಂದ ಭಜನಾ ಮಂಡಳಿ ಬದಿಯಡ್ಕ, ಶ್ರೀ ಮಹಾವಿಷ್ಣು ಭಜನಾ ಸಂಘ ಮುಂಡಿತ್ತಡ್ಕ ಭಜನಾ ಝೇಂಕಾರದಲ್ಲಿ ಪಾಲ್ಗೊಂಡರು. ಸಾಂಸ್ಕøತಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ವಿದುಷಿ ಸರಸ್ವತಿ ಕೃಷ್ಣನ್ ಮತ್ತು ಬಳಗ ಸಾರಂಗ ಸಂಗೀತ ಶಾಲೆ ಕುಮಾರಮಂಗಲ ಬೇಳ ಇವರಿಂದ ಸಂಗೀತ ಕಚೇರಿ, ಅಪರಾಹ್ನ ಪರಮೇಶ್ವರ ಆಚಾರ್ಯ ಕಲಾಸೇವಾ ಪ್ರತಿಷ್ಠಾನ ನೀರ್ಚಾಲು ಇವರಿಂದ ಯಕ್ಷಗಾನ ತಾಳಮದ್ದಳೆ ವಾಮನ ಚರಿತ್ರೆ, ಸಂಜೆ 7ರಿಂದ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಇವರ ಬದಿಯಡ್ಕ ಶಾಖೆಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಪ್ರದರ್ಶನಗೊಂಡಿತು.