ಕುಂದಾಪುರ: ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ನಟ, ಮಾಲಿವುಡ್ನ ಸೂಪರ್ಸ್ಟಾರ್ ಮೋಹನ್ಲಾಲ್ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಕುಂದಾಪುರ: ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ನಟ, ಮಾಲಿವುಡ್ನ ಸೂಪರ್ಸ್ಟಾರ್ ಮೋಹನ್ಲಾಲ್ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಉಡುಪಿ ಜಿಲ್ಲೆ ಕುಂದಾಪುರದ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ಪ್ರಾಂಗಣದಲ್ಲಿ ಗಣಪತಿ, ವೀರಭದ್ರ ಗುಡಿಗಳಿಗೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಬಂದಿದ್ದ ಭಕ್ತರು ಮೋಹನ್ ಲಾಲ್ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು, ವೀಡಿಯೋ ಮಾಡಲು ನೂರಾರು ಜನ ಮುಗಿಬಿದ್ದರು. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.