ವಾಷಿಂಗ್ಟನ್ : ಅಮೆರಿಕವು ಯಾವುದೇ ಆಕ್ರಮಣಕಾರಿ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಹೇಳಿದ್ದಾರೆ ಎಂದು CNN ವರದಿ ಮಾಡಿದೆ.
ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಸಿಎನ್‌ಎನ್‌ಗೆ ತಿಳಿಸಿದ ನಂತರ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್ ದಾಳಿಯ ಕುರಿತು ಸ್ಪಷ್ಟನೆ ನೀಡಿದ್ದಾರೆ.
"ನಾವು G7 ಕುರಿತಂತೆ ನಮ್ಮ ಗಮನವನ್ನು ಕೇಂದ್ರೀಕರಿಸಿದ್ದೇವೆ. ಎರಡು ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಕುರಿತು ನಾವು ಗಮನಹರಿಸುತ್ತಿದ್ದೇವೆ. ನಮ್ಮ ಹೇಳಿಕೆಗಳು ಅದನ್ನು ಪ್ರತಿಫಲಿಸುತ್ತವೆ" ಎಂದು ಅವರು ಹೇಳಿದ್ದಾರೆ.
ಸಿರಿಯಾದಲ್ಲಿರುವ ಇರಾನ್ ರಾಯಭಾರಿ ಕಚೇರಿಯ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ ನಂತರ, ಎರಡು ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ.