ಕಾಸರಗೋಡು: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸಲಾಗಿದ್ದು, ಇದರ ಆದೇಶಗಳನ್ನು ಸಾಫ್ಟ್‍ವೇರ್‍ನಲ್ಲಿ ಪ್ರಕಟಿಸಲಾಗಿದೆ. ಆಯಾ ಇಲಾಖೆಗಳ ಮುಖ್ಯಸ್ಥರು ತಮ್ಮ ಕಚೇರಿಗಳ ನೌಕರರು ಚುನಾವಣಾ ಕರ್ತವ್ಯವನ್ನು ಹೊಂದಿದ್ದಾರೆಯೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು
ಆದೇಶಗಳನ್ನು ಡೌನ್‍ಲೋಡ್ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಬೇಕು ಮತ್ತು ಸಾಫ್ಟ್‍ವೇರ್‍ನಲ್ಲಿ ಆರ್ಡರ್ ಸರ್ವ್ ಸ್ಟೇಟಸ್ ಆಯ್ಕೆಯನ್ನು ದಾಖಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ನಿರ್ದೇಶನ ನೀಡಿದ್ದಾರೆ. ಲೋಕಸಭೆ ಚುನಾವಣೆಯ ಮೊದಲ ಹಂತದ ತರಬೇತಿ ಏಪ್ರಿಲ್ 2, 3, 4 ರಂದು ಮಂಡಲವಾರು ಅಧ್ಯಕ್ಷರು ಮತ್ತು ಪ್ರಥಮ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ ತರಗತಿಗಳನ್ನು ನಡೆಸಲಾಗುವುದು. ಕರ್ತವ್ಯ ಆದೇಶಗಳನ್ನು ಪಡೆದ ಅಧಿಕಾರಿಗಳು ಕಡ್ಡಾಯವಾಗಿ ಪ್ರಸಕ್ತ ತರಗತಿಗಳಿಗೆ ಹಾಜರಾಗಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆ ತಿಳಿಸಿದೆ.