ಲಖನೌ: ಗರ್ಭಿಣಿ ಚಲಿಸುತ್ತಿದ್ದ ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಪ್ರಯಾಗ್ ರಾಜ್ ನ ದುರಂತೋ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ.
ಲಖನೌ: ಗರ್ಭಿಣಿ ಚಲಿಸುತ್ತಿದ್ದ ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಪ್ರಯಾಗ್ ರಾಜ್ ನ ದುರಂತೋ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ.
ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ವೇಳೆ ಟಿಕೆಟ್ ತಪಾಸಣಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಆಕೆಯ ನೆರವಿಗೆ ಧಾವಿಸಿದ್ದಾರೆ.
ಟಿಕೆಟ್ ತಪಾಸಣಾ ಸಿಬ್ಬಂದಿ ಶ್ರೀನಂದ್ ಬಿಹಾರಿ ಮೀನಾ, ಅಲೋಕ್ ಶರ್ಮಾ, ರಾಜಕರಣ್ ಯಾದವ್, ಇಂದ್ರ ಕುಮಾರ್ ಹೆರಿಗೆಗೆ ನೆರವಾದರು ಎಂದು ಟ್ವಿಟ್ಟರ್ ನಲ್ಲಿ ರೈಲ್ವೆ ಇಲಾಖೆ ತಿಳಿಸಿದೆ.
ಇದಕ್ಕೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಯ ಕೆಲಸವನ್ನು ಶ್ಲಾಘಿಸಿದ್ದಾರೆ.