HEALTH TIPS

ಕಾಶ್ಮೀರದಲ್ಲಿ ವಲಸೆ ಕಾರ್ಮಿಕನ ಕೊಂದ ಉಗ್ರರು: ವಾರದಲ್ಲಿ ಎರಡನೇ ಘಟನೆ

 ಶ್ರೀನಗರ: ಶಂಕಿತ ಉಗ್ರರು ಬಿಹಾರ ಮೂಲದ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಕಾಶ್ಮೀರ ಪೊಲೀಸರು ಹೇಳಿದ್ದಾರೆ.


ಅನಂತನಾಗ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ರಾಜು ಶಾ ಎಂದು ಗುರುತಿಸಲಾಗಿದೆ.

ಶಂಕಿತ ಉಗ್ರರು ರಾಜು ಶಾ ಮೇಲೆ ಗುಂಡು ಹಾರಿಸಿದ್ದರು.

ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗೆ ರಾಜು ಶಾ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ವಾರದ ಹಿಂದೆ ಡೆಹ್ರಾಡೂನ್‌ ಮೂಲದ ವ್ಯಕ್ತಿಯ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ಆ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries