ಮಂಜೇಶ್ವರ: ವಾರಂಟ್ ಜಾರಿಯಲ್ಲಿದ್ದರೂ, ತಲೆಮರೆಸಿಕೊಂಡು ಸುತ್ತಾಡುತ್ತಿರುವ ಆರೋಪಿಗಳ ಪತ್ತೆಗಾಗಿ ಮಂಜೇಶ್ವರ ಠಾಣೆ ಪೊಲೀಸರು ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಲ್ಲಿ ಒಂಬತ್ತುಮಂದಿ ವಾರಂಟ್ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೂ ಹಲವರು ತಲೆಮರೆಸಿಕೊಂಡು ಸುತ್ತಾಡುತ್ತಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ವಾರಂಟ್ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಡಿವೈಎಸ್‍ಪಿ ಹರಿಪ್ರಸಾದ್ ನಿರ್ದೇಶಾನುಸಾರ, ಮಂಜೇಶ್ವರ ಠಾಣೆ ಇನ್ಸ್‍ಪೆಕ್ಟರ್ ರಾಜೀವ್‍ಕುಮಾರ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದೆ.