ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಡೀಪ್‌ಫೇಕ್ ವಿಡಿಯೊ ಹಂಚಿಕೊಂಡ ಆರೋಪದ ಮೇಲೆ ಮಹಾರಾಷ್ಟ್ರ ಯೂತ್ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಮತ್ತು ಇತರ 16 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಡೀಪ್‌ಫೇಕ್ ವಿಡಿಯೊ ಹಂಚಿಕೊಂಡ ಆರೋಪದ ಮೇಲೆ ಮಹಾರಾಷ್ಟ್ರ ಯೂತ್ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಮತ್ತು ಇತರ 16 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ತಿರುಚಿದ ವಿಡಿಯೊ ಹಂಚಿಕೊಂಡ ಆರೋಪಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ನಾಯಕ ಪ್ರತೀಕ್ ಕರ್ಪೆ ಅವರು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಸೈಬರ್ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದರು.
ದುರುದ್ದೇಶದಿಂದ ತಿರುಚಿದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ವಿಡಿಯೊವನ್ನು ತೆಗೆದುಹಾಕಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಧಾರ್ಮಿಕ ನೆಲೆಯಲ್ಲಿ ಮುಸ್ಲಿಮರ ಮೀಸಲಾತಿ ರದ್ದುಪಡಿಸಲು ಬದ್ಧವೆಂದು ಅಮಿತ್ ಶಾ ಅವರು ತೆಲಂಗಾಣದಲ್ಲಿ ನೀಡಿದ್ದ ಹೇಳಿಕೆಯನ್ನು, ಅವರು ಎಲ್ಲ ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ಪ್ರತಿಪಾದಿಸುತ್ತಿದ್ದಾರೆ ಎಂದು ಬಿಂಬಿಸುವಂತೆ ಬದಲಾಯಿಸಿ ತಿರುಚಿದ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿತ್ತು.