ಕೊಟ್ಟಾಯಂ: ಚಲಿಸುತ್ತಿದ್ದ ರೈಲಿನಲ್ಲಿ ರೂಪದರ್ಶಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ 25 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ರೈಲ್ವೆ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ವಿವಿಧ ಸಿ.ಸಿ.ಟಿ.ವಿ. ದೃಶ್ಯಗಳು ಮತ್ತು ಮೊಬೈಲ್ ಟವರ್ ಲೊಕೇಶನ್ ಅನ್ನು ಪರಿಶೀಲಿಸಿದ ಬಳಿಕ ಕೊಲ್ಲಂ ನಿವಾಸಿ, ಆರೋಪಿ ಅನ್ಸರ್ ಖಾನ್ ಎಂಬಾತನನ್ನು ಗುರುವಾರ ಬಂಧಿಸಲಾಗಿದೆ.
ಏ.10ರಂದು ಕೇರಳದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ತಮಿಳುನಾಡಿನ ರೂಪದರ್ಶಿಗೆ ಯುವಕ ಕಿರುಕುಳ ನೀಡಿದ್ದಾನೆ. ರೈಲು ತಿರುವನಂತಪುರ ತಲುಪಿದ ಬಳಿಕ ಯುವತಿ ರೈಲ್ವೆ ಪೊಲೀಸರಿಗೆ ದೂರು ನೀಡಿದ್ದಾಳೆ. ಬಳಿಕ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಇಲ್ಲಿನ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆರೋಪಿ ಅನ್ಸರ್ ಖಾನ್ ರೈಲಿನಲ್ಲಿ ಯುವತಿಗೆ ಕಿರುಕುಳ ನೀಡಿ ಕೊಟ್ಟಾಯಂ ರೈಲು ನಿಲ್ದಾಣದಲ್ಲಿ ಪರಾರಿಯಾಗಿದ್ದಾನೆ. ಆತನ ವಿರುದ್ಧ ಇತರ ಕಿರುಕುಳ ಪ್ರಕರಣಗಳೂ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.