ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜಾಗತಿಕ ದೈತ್ಯ ಸರ್ಚ್ ಎಂಜಿನ್ ಗೂಗಲ್ ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದೆ.

ಗೂಗಲ್ ವಿಶೇಷ ಸಂದರ್ಭಗಳಲ್ಲಿ ತನ್ನ ಡೂಡಲ್ ಅನ್ನು ಬದಲಾಯಿಸುತ್ತದೆ. ಇಂದು ಕೂಡ ತನ್ನ ಡೂಡಲ್ ಅನ್ನು ಬದಲಾಯಿಸಿದ್ದು, ಶಾಯಿ ಹಚ್ಚಿದ ತೋರು ಬೆರಳಿನ ಚಿತ್ರವನ್ನು ಹಂಚಿಕೊಂಡಿದೆ.
ದೇಶದ 13 ರಾಜ್ಯಗಳಲ್ಲಿನ 88 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ಕರ್ನಾಟಕದ 14 ಮತ್ತು ಕೇರಳದ ಎಲ್ಲ 20 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಜತೆಗೆ, ರಾಜಸ್ಥಾನದ 13, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ 8, ಮಧ್ಯಪ್ರದೇಶದಲ್ಲಿ 7, ಬಿಹಾರ ಮತ್ತು ಅಸ್ಸಾಂನಲ್ಲಿ ತಲಾ 5, ಛತ್ತೀಸಗಡ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 3 ಹಾಗೂ ಮಣಿಪುರ, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ 1 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿದೆ.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಶಶಿ ತರೂರ್, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ನಟಿ ಹೇಮಾ ಮಾಲಿನಿ ಸೇರಿದಂತೆ ಪ್ರಮುಖರು ಕಣದಲ್ಲಿದ್ದಾರೆ.