ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಮತ್ತು ಶ್ರೀನಗರದ ಹಾಲಿ ಸಂಸದ ಫಾರೂಕ್ ಅಬ್ದುಲ್ಲಾ ಆರೋಗ್ಯ ಸಮಸ್ಯೆಗಳಿಂದಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರ ಮಗ ಹಾಗೂ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಬುಧವಾರ ಹೇಳಿದರು.

ರಾವಲ್‌ಪೋರಾದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಒಮರ್ ಅಬ್ದುಲ್ಲಾ ಈ ಕುರಿತು ಘೋಷಣೆ ಮಾಡಿದರು.
ಫಾರೂಕ್ ಅಬ್ದುಲ್ಲಾ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಅಲಿ ಮೊಹಮ್ಮದ್ ಹಾಗೂ ಇತರ ಮುಖಂಡರ ಅನುಮತಿ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದಾರೆ ಎಂದು ಅವರು ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರದಿಂದ 2002ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಫಾರೂಕ್ ಅಬ್ದುಲ್ಲಾ, 2009ರಲ್ಲಿ ಪುನರಾಯ್ಕೆಯಾಗಿದ್ದರು. 2009ರಲ್ಲಿ ರಾಜ್ಯಸಭೆಗೆ ರಾಜೀನಾಮೆ ಸಲ್ಲಿಸಿದ ಅವರು ಶ್ರೀನಗರ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ, ಯುಪಿಎ ಸರ್ಕಾರದಲ್ಲಿ ಸಚಿವರೂ ಆಗಿದ್ದರು. 2014ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದ ಅವರು, 2017ರ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿಯೂ ಗೆದ್ದು ಸಂಸದರಾಗಿದ್ದರು. ಅವರಿಗೆ 86 ವರ್ಷ ವಯಸ್ಸು.