ನವದೆಹಲಿ: ವಿವಿಧ ಬೇಡಿಕೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ತಮಿಳುನಾಡಿನ ರೈತರಲ್ಲಿ ಕೆಲವರು ಮರ ಹಾಗೂ ಟವರ್ ಏರಿದ್ದು, ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ವಿವಿಧ ಬೇಡಿಕೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ತಮಿಳುನಾಡಿನ ರೈತರಲ್ಲಿ ಕೆಲವರು ಮರ ಹಾಗೂ ಟವರ್ ಏರಿದ್ದು, ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಸುಮಾರು 100 ರೈತರು ಭಾಗವಹಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದು, ₹5 ಸಾವಿರ ಪಿಂಚಣಿ ಮತ್ತು ವೈಯಕ್ತಿಕ ವಿಮೆ, ನದಿಗಳ ಜೋಡಣೆ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟಿದ್ದಾರೆ.
'ಮಹಿಳೆಯೊಬ್ಬರು ಮರ ಏರಿದ್ದು, ಇಬ್ಬರು ರೈತರು ಟವರ್ ಏರಿದ್ದರು. ಎಲ್ಲರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ' ಎಂದು ನವದೆಹಲಿ ಡಿಸಿಪಿ ದೇವೇಶ್ ಕುಮಾರ್ ಮಹಲಾ ತಿಳಿಸಿದ್ದಾರೆ.