ತೈಪೆ: ತೈವಾನ್‌ನ ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಸಾವು ನೋವುಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ ಲಭ್ಯವಾಗಿಲ್ಲ.
ತೈಪೆ: ತೈವಾನ್‌ನ ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಸಾವು ನೋವುಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ ಲಭ್ಯವಾಗಿಲ್ಲ.
ರಾಜಧಾನಿ ತೈಪೆ ಸೇರಿದಂತೆ ಪೂರ್ವ ತೈವಾನ್‌ನ ಹಲವು ಭಾಗಗಳಲ್ಲಿ ಭೂಕಂಪನವಾಗಿದೆ.
ಇತ್ತೀಚಿನ ಮಾಹಿತಿ ಪ್ರಕಾರ ನಾಲ್ವರು ಮೃತಪಟ್ಟು 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೂರ್ವ ತೈವಾನ್, ತೈಪೆ, ಓಕಿನಾವಾ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಕಟ್ಟಡಗಳು ಕುಸಿದಿವೆ, ಆದರೆ ಕಟ್ಟಡ ಕುಸಿದಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಭೂಮಿಯ ಮೇಲ್ಮೈಯಿಂದ ಸುಮಾರು 16 ಕಿ.ಮೀ ಆಳದಲ್ಲಿ ತೈಪೆಯ ಸಮೀಪ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ತೈವಾನ್ ಹವಮಾನ ಇಲಾಖೆ ವರದಿ ಮಾಡಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.