ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಶುಕ್ರವಾರ ಘೋಷಿಸಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಶುಕ್ರವಾರ ಘೋಷಿಸಿದೆ.
ಶಿಯಾ ಮುಖಂಡರಾದ ಅಗಾ ಸೈಯದ್ ರುಹುಲ್ಲಾ ಮೆಹದಿ ಅವರು ಮಧ್ಯ ಕಾಶ್ಮೀರದ ಶ್ರೀನಗರ ಕ್ಷೇತ್ರದಿಂದ ಸ್ಪರ್ಧಿಸುವರು ಎಂದು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಸುದ್ದಿಗಾರರಿಗೆ ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರಳಿ ಸಿಗುವವರೆಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಒಮರ್ ಅಬ್ದುಲ್ಲಾ ಅವರು ಈ ಹಿಂದೆ ಘೋಷಿಸಿದ್ದರು.
ಬಾರಾಮುಲ್ಲ ಲೋಕಸಭಾ ಕ್ಷೇತ್ರವು 18 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲೊಂದಾಗಿದೆ. ಈ ಬಾರಿ ಬಾರಾಮುಲ್ಲಾ ಕ್ಷೇತ್ರವು ಒಮರ್ ಮತ್ತು ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜ್ಜಾದ್ ಗನಿ ಲೋನ್ ನಡುವಿನ ನೇರ ಹಣಾಹಣಿಗೆ ಸಾಕ್ಷಿಯಾಗಲಿದೆ ಎಂದು ಮೂಲಗಳು ಹೇಳಿವೆ.
ಈ ಕ್ಷೇತ್ರದಲ್ಲಿ ಶಿಯಾ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರ ಬೆಂಬಲ ಒಮರ್ ಅವರಿಗೆ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.