ನವದೆಹಲಿ: ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಸೇವೆಯಿಂದ ವಜಾಗೊಳಿಸಿ ವಿಜಿಲೆನ್ಸ್ ನಿರ್ದೇಶನಾಲಯ (ಡಿಒವಿ) ಆದೇಶ ಹೊರಡಿಸಿದೆ. ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ಅವರನ್ನು ಏಪ್ರಿಲ್ 9ರಂದು ಬಿಭವ್ ಕುಮಾರ್ ಭೇಟಿಯಾಗಿದ್ದರು.
ಅಬಕಾರಿ ನೀತಿ ಹಗರಣ ಜತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧವನ್ನು ಎತ್ತಿಹಿಡಿದಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಅರ್ಜಿ ಸಲ್ಲಿಸಿದ್ದರು. ಜಾರಿ ನಿರ್ದೇಶನಾಲವು ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿತ್ತು.
ಈ ಹಿಂದೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಭವ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.