ಇಂಫಾಲ: ಇಂಫಾಲ್ ಪೂರ್ವ ಜಿಲ್ಲೆಯ ಮತಗಟ್ಟೆಯ ಬಳಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ ಮೂವರು ದುಷ್ಕರ್ಮಿಗಳನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂಫಾಲ: ಇಂಫಾಲ್ ಪೂರ್ವ ಜಿಲ್ಲೆಯ ಮತಗಟ್ಟೆಯ ಬಳಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ ಮೂವರು ದುಷ್ಕರ್ಮಿಗಳನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶುಕ್ರವಾರ ಮೊಯಿರಂಗ್ಯಾಂಪು ಸಾಜೆಬ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬಂಧಿತ ವ್ಯಕ್ತಿಗಳು ಭಾಗಿಯಾಗಿದ್ದು, ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
'ಗುಂಡಿನ ದಾಳಿ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಶುಕ್ರವಾರ ಸಂಜೆ ಘಟನಾ ಸ್ಥಳದಿಂದ 5 ಕೀ.ಮೀ ದೂರದಲ್ಲಿ ಅವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರಿಂದ 22 ಪಿಸ್ತೂಲ್‌ಗಳು ಮತ್ತು ₹15 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.
ಮೊದಲ ಹಂತದ ಮತದಾನದಲ್ಲಿ ಮಣಿಪುರದಲ್ಲಿ ಶೇ.68ರಷ್ಟು ಮತ ಪ್ರಮಾಣ ದಾಖಲಾಗಿದೆ.