ನವದೆಹಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನಕ್ಕೆ (ಮೇ 20) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿತು.
ನವದೆಹಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನಕ್ಕೆ (ಮೇ 20) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿತು.
ಎಂಟು ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ, ಲಡಾಖ್ನ 49 ಕ್ಷೇತ್ರಗಳಿಗೆ ಅಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.
ಐದನೇ ಹಂತದಲ್ಲಿ ಬಿಹಾರ, ಜಾರ್ಖಂಡ್, ಮಹಾರಾಷ್ಟ್ರ, ಒಡಿಶಾ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದರು.
ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ. ಮೇ 4ರಂದು ಪರಿಶೀಲನೆ ನಡೆಯಲಿದೆ ಮತ್ತು ನಾಮಪತ್ರ ಹಿಂಪಡೆಯಲು ಮೇ 6 ಕೊನೆಯ ದಿನಾಂಕವಾಗಿದೆ ಎಂದು ವಿವರಿಸಿದರು.