ಇಂಫಾಲ: ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಎರಡು ಗ್ರಾಮಗಳ ಜನರ ನಡುವೆ ಭಾನುವಾರ ನಡೆದ ಸಂಘರ್ಷದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂಫಾಲ: ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಎರಡು ಗ್ರಾಮಗಳ ಜನರ ನಡುವೆ ಭಾನುವಾರ ನಡೆದ ಸಂಘರ್ಷದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಇಂಫಾಲ್‌ನ ಕೌಟ್ರಕ್ ಗ್ರಾಮದ ಮೇಲೆ ಪಕ್ಕದ ಕಾಂಗ್ಪೋಕ್ಪಿ ಜಿಲ್ಲೆಯ ಗ್ರಾಮವೊಂದರ ಹತ್ತಾರು ಬಂದೂಕುಧಾರಿಗಳು ದಾಳಿ ನಡೆಸಿದರು.
ಇದೇ ವೇಳೆ, ಹತ್ಯೆ ಖಂಡಿಸಿ ಕಾಂಗ್‌ಪೋಕ್ಪಿ ಜಿಲ್ಲೆಯ ಕಮಿಟಿ ಆನ್ ಟ್ರೈಬಲ್ ಯುನಿಟಿ (ಸಿಒಟಿಯು) ಭಾನುವಾರ 12 ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿತ್ತು.
ಮಣಿಪುರದಲ್ಲಿ ಕಳೆದ ಮೇ 3ರಂದು ಜನಾಂಗೀಯ ಸಂಘರ್ಷ ಆರಂಭವಾದಾಗಿನಿಂದಲೂ ಕೌಟ್ರಕ್ ಗ್ರಾಮದಲ್ಲಿ ಕುಕಿ ಬುಡಕಟ್ಟು ಸಮುದಾಯ ಮತ್ತು ಮೈತೇಯಿ ಸಮುದಾಯಗಳ ನಡುವೆ ಘರ್ಷಣೆ ನಡೆಯುತ್ತಲೇ ಇದೆ.