ನವದೆಹಲಿ: ಚುನಾವಣಾ ಪ್ರಚಾರದ ವೇಳೆ ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್ ಅವರ ಕಣ್ಣಿಗೆ ಗಾಯವಾಗಿದೆ.
ನವದೆಹಲಿ: ಚುನಾವಣಾ ಪ್ರಚಾರದ ವೇಳೆ ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್ ಅವರ ಕಣ್ಣಿಗೆ ಗಾಯವಾಗಿದೆ.
ಮಂಗಳವಾರ ಈ ಘಟನೆ ನಡೆದಿದ್ದು, ಬುಧವಾರ ಕಣ್ಣಿಗೆ ಬ್ಯಾಂಡೇಜ್ ಹಾಕಿಕೊಂಡೇ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ.
ಆದರೆ ಕಣ್ಣಿಗೆ ಹೇಗೆ ಗಾಯವಾಯಿತು ಎನ್ನುವ ಬಗ್ಗೆ ಮಾಹಿತಿ ಹಂಚಿಕೊಂಡಿಲ್ಲ.
ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಅವರು ಇದೇ ಮೊದಲ ಬಾರಿಗೆ ನವದೆಹಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.