ಕಾಸರಗೋಡು: ಶಿಕ್ಷಣ ಸಂಸ್ಥೆಗಳನ್ನು ಚುನಾವಣಾ ಪ್ರಚಾರಕ್ಕೆ ವೇದಿಕೆಯಾಗಿ ಬಳಸಿಕೊಳ್ಳಬಾರದು ಎಂದು ನೀತಿ ಸಂಹಿತೆ ಸೂಚಿಸಿದ್ದರೂ ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ವಿವಿಧ ಅಭ್ಯರ್ಥಿಗಳು, ಸಿಪಿಐ-ಎಂ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ವಿವಿಧ ಶಿಕ್ಷಣ ಸಂಸ್ಥೆಗಳನ್ನು ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ.
ಆದುದರಿಂದ ಜಿಲ್ಲೆಯ ಶಿಕ್ಶಣ ಸಂಸ್ಥೆಗಳನ್ನು ಚುನಾವಣಾ ಪ್ರಚಾರಕ್ಕಾಗಿರುವ ವೇದಿಕೆಯಾಗಿ ಬಳಸಿಕೊಳ್ಳದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು. ಈ ಕುರಿತು ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಿಗೆ ವಿಶೇಷ ಸೂಚನೆ ನೀಡಲಾಗಿದೆ ಎಂದು ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಸುಫಿಯಾನ್ ಅಹಮ್ಮದ್ ಮಾಹಿತಿ ನೀಡಿದ್ದಾರೆ.