ರಾಯಪುರ: ಛತ್ತೀಸಗಢ ರಾಜ್ಯದ ನಾರಾಯಣಪುರ ಮತ್ತು ಕಾಂಕೇರ್ ಜಿಲ್ಲೆಗಳ ಗಡಿ ಪ್ರದೇಶದ ಕಾಡಿನಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು ಏಳು ಜನ ನಕ್ಸಲರು ಹತ್ಯೆಯಾಗಿದ್ದಾರೆ.
ರಾಯಪುರ: ಛತ್ತೀಸಗಢ ರಾಜ್ಯದ ನಾರಾಯಣಪುರ ಮತ್ತು ಕಾಂಕೇರ್ ಜಿಲ್ಲೆಗಳ ಗಡಿ ಪ್ರದೇಶದ ಕಾಡಿನಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು ಏಳು ಜನ ನಕ್ಸಲರು ಹತ್ಯೆಯಾಗಿದ್ದಾರೆ.
ನಕ್ಸಲ್ ವಿರೋಧಿ ಕಾರ್ಯಾಚರಣೆಯ ಭಾಗವಾಗಿ ವಿಶೇಷ ಕಾರ್ಯಪಡೆ ಪೊಲೀಸರು (ಎಸ್‌ಟಿಎಫ್) ಹಾಗೂ ಜಿಲ್ಲಾ ಮೀಸಲು ಪಡೆ ಪೊಲೀಸರು (ಡಿಆರ್‌ಜಿಪಿ) ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು.
ಮಂಗಳವಾರ ಬೆಳಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನಕ್ಸಲರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆಯಿತು. ಘಟನೆಯಲ್ಲಿ 7 ಜನ ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಆ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆಸಲಾಗಿದ್ದು ಘಟನೆ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಘಟನೆಯಲ್ಲಿ ಭದ್ರತಾ ಸಿಬ್ಬಂದಿಗೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ.