ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಗೋವಾ ವಿಧಾನಸಭೆ ಚುನಾವಣೆ ವೇಳೆ ಎಎಪಿಗೆ ನಿಧಿಯನ್ನು ನಿರ್ವಹಿಸುತ್ತಿದ್ದ ಚನ್‌ಪ್ರೀತ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿವೆ.
ಈ ಮೂಲಕ ಪ್ರಕರಣದಲ್ಲಿ ಇದುವರೆಗೆ ಬಂಧಿಸಿದವರ ಸಂಖ್ಯೆ 17ಕ್ಕೆ ಏರಿದೆ. ಚನ್‌ಪ್ರೀತ್ ಸಿಂಗ್ ಅವರನ್ನು ಈ ಹಿಂದೆ ಇದೇ ಪ್ರಕರಣದಲ್ಲಿ ಸಿಬಿಐ ಸಹ ಬಂಧಿಸಿತ್ತು.
'2022ರ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪರ ಪ್ರಚಾರ, ಸಮೀಕ್ಷೆ, ವಲಯ ನಿರ್ವಹಣೆ ಮಾಡುತ್ತಿದ್ದವರಿಗೆ ಚನ್‌ಪ್ರೀತ್ ಸಿಂಗ್ ಹಣ ನೀಡುವ ಜವಾಬ್ದಾರಿ ಹೊತ್ತಿದ್ದರು' ಎಂದು ಇ.ಡಿ ಕೋರ್ಟ್‌ಗೆ ತಿಳಿಸಿತ್ತು.