ಕೋಲ್ಕತ್ತ: ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಲುವಾಗಿ 10 ಸದಸ್ಯರ ಸಿಬಿಐ ತಂಡವು ಪಶ್ಚಿಮ ಬಂಗಾಳದ ಸಂಘರ್ಷಪೀಡಿತ ಸಂದೇಶ್‌ಖಾಲಿಗೆ ಶನಿವಾರ ಭೇಟಿ ನೀಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ತಂಡದ ಒಂದು ಗುಂಪು ಸಂದೇಶ್‌ಖಾಲಿಯ ಸುಂದರಿಖಾಲಿ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರ ಜೊತೆ ಚರ್ಚೆ ನಡೆಸಿ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿತು.
ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ಸಮಗ್ರ ವರದಿ ನೀಡಿವಂತೆ ಕಳೆದ ವಾರವಷ್ಟೇ ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ನಿರ್ದೇಶಿಸಿತ್ತು.
ತನಿಖೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಸಿಬಿಐ ಅಧಿಕಾರಿಯೊಬ್ಬರು, 'ನಾವು ಸಂದೇಶ್‌ಖಾಲಿಯಲ್ಲಿದ್ದೇವೆ. ಅಲ್ಲಿಯ ಗ್ರಾಮಸ್ಥರ ಆರೋಪಗಳನ್ನು ದಾಖಲಿಸಿಕೊಳ್ಳುತ್ತಿದ್ದೇವೆ' ಎಂದು ಹೇಳಿದ್ದಾರೆ.