ದುಬೈ: ಹಿಂದೆಂದೂ ಕಾಣದಂತಹ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ದುಬೈ ಅಂತರರಾಷ್ಟ್ರೀಯ ವಿಮಾನನಿಲ್ದಾಣವು ಈಗ ಪೂರ್ಣ ಪ್ರಮಾಣದಲ್ಲಿ ಮತ್ತೆ ಕಾರ್ಯಾಚರಿಸುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ದುಬೈ: ಹಿಂದೆಂದೂ ಕಾಣದಂತಹ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ದುಬೈ ಅಂತರರಾಷ್ಟ್ರೀಯ ವಿಮಾನನಿಲ್ದಾಣವು ಈಗ ಪೂರ್ಣ ಪ್ರಮಾಣದಲ್ಲಿ ಮತ್ತೆ ಕಾರ್ಯಾಚರಿಸುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
'ಯುಎಇಯಲ್ಲಿ ಕಳೆದ 75 ವರ್ಷಗಳಲ್ಲಿಯೇ ಸುರಿದ ಭಾರಿ ಮಳೆ ಪರಿಣಾಮ ದುಬೈ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ನೀರು ನಿಂತು ಸಮಸ್ಯೆಯಾಗಿತ್ತು.
ಕಳೆದ ಮಂಗಳವಾರ ಸಂಜೆ ಸುರಿದ ಭಾರಿ ಮಳೆ ಪರಿಣಾಮ, ಸಾವಿರಾರು ಜನ ಪ್ರಯಾಣಿಕರು ವಿಮಾನನಿಲ್ದಾಣದಲ್ಲಿ ಸಿಲುಕಿ, ತೊಂದರೆ ಅನುಭವಿಸುವಂತಾಗಿತ್ತು. ರನ್‌ವೇ ಸೇರಿದಂತೆ ವಿಮಾನನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ವಿಮಾನನಿಲ್ಧಾಣದ ಒಳಗೆ ಅಥವಾ ಹೊರಗೆ ಹೋಗಲು ಸಾಧ್ಯವೇ ಇಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗಿತ್ತು.