ಕಣ್ಣೂರು, ಕೇರಳ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಅಲಿಯಾಸ್ ಪ್ರದೀಪ್ ಭಾನುವಾರ ಕೇರಳದ ಕಣ್ಣೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.
ಕಣ್ಣೂರು, ಕೇರಳ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಅಲಿಯಾಸ್ ಪ್ರದೀಪ್ ಭಾನುವಾರ ಕೇರಳದ ಕಣ್ಣೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.
ಇತ್ತೀಚೆಗೆ ತಮ್ಮ ತಂಡದ ಸದಸ್ಯರ ಜೊತೆ ಕೇರಳ-ಕರ್ನಾಟಕ ಗಡಿ ಭಾಗದ ಕಾಡಿನಲ್ಲಿ ಸಂಚರಿಸುತ್ತಿದ್ದಾಗ ಸುರೇಶ್ ಕಾಡಾನೆ ದಾಳಿಗೆ ತುತ್ತಾಗಿದ್ದರು.
ಚಿಕಿತ್ಸೆ ಪಡೆದುಕೊಂಡು ಸದ್ಯ ಸ್ವಲ್ಪ ಚೇತರಿಸಿಕೊಂಡಿರುವ ಸುರೇಶ್, ತಾನು ಪೊಲೀಸರಿಗೆ ಶರಣಾಗುತ್ತಿದ್ದೇನೆ ಎಂದು ಘೋಷಿಸಿದ್ದಾರೆ.
ಶರಣಾಗುವ ವೇಳೆ ಗಾಲಿ ಕುರ್ಚಿಯಲ್ಲಿ ಬಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ನಾನು ಕಳೆದ 23 ವರ್ಷಗಳಿಂದ ನಕ್ಸಲ್ ಚಳವಳಿಯಲ್ಲಿದ್ದೆ. ಬಹಳ ಹಿಂದೆನೇ ಶರಣಾಗಬೇಕೆಂದುಕೊಂಡಿದ್ದೆ. ಆದರೆ, ಕಾಲ ಕೂಡಿ ಬಂದಿರಲಿಲ್ಲ. ನಾನೊಬ್ಬ ಮಾವೋವಾದಿಯಾಗಿ ಏನು ಮಾಡಲು ಆಗಲಿಲ್ಲ. ಅಲ್ಲದೇ ನಮ್ಮ ಸಂಗಾತಿಗಳಾರೂ ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬದಲಾವಣೆ ತರಲು ಆಗಲಿಲ್ಲ ಎಂದು ಹೇಳಿದ್ದಾರೆ.
ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ಹಲವೆಡೆ ಸುರೇಶ್ ವಿರುದ್ಧ 35ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.