ಕಾಸರಗೋಡು : ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಸಿದ್ಧತೆಗಳು ಸರಿಯಾದ ದಿಶೆಯಲ್ಲಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ಕೇಂದ್ರ ಚುನಾವಣಾ ಆಯೋಗ ನೇಮಿಸಿರುವ ಜನರಲ್ ಒಬ್ಸರ್ವರ್ ರಿಷಿರೇಂದ್ರ ಕುಮಾರ್ ಐಎಎಸ್ ತಿಳಿಸಿದ್ದಾರೆ.
ಅವರು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾ ಅವಲೋಕನಾ ಸಭೆಯಲ್ಲಿ ಮಾತನಾಡಿದರು. ಚುನಾವಣಾ ದಿನಾಂಕ ಸಮೀಪಿಸುತ್ತಿದ್ದು, ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಗಡಿ ಭಾಗಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಆಯಾಕರ್ತವ್ಯಕ್ಕೆ ನಿಯೋಜಿಸಿರುವ ಸಂಬಂಧಿಸಿದ ಅಧಿಕಾರಿಗಳು ಮತದಾನದ ದಿನದ ವರೆಗೆ ಮಾತ್ರವಲ್ಲದೆ ಮತ ಎಣಿಕೆಯಾಗಿ, ಚುನಾವಣಾ ವೆಚ್ಚದ ಲೆಕ್ಕಾಚಾರ ಸಮರ್ಪಿಸುವ ವರೆಗೆ ಪ್ರತಿ ಹಂತಗಳಲ್ಲಿಯೂ ಸಂಭಂದಪಟ್ಟ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು. ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಪ್ರಚಾರ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಕೆ.ಇನ್ಬಾಶೇಖರ್, ಪೆÇಲೀಸ್ ನಿರೀಕ್ಷಕ ಸಂತೋಷ್ ಸಿಂಗ್ ಗೌರ್, ಚುನಾವಣಾ ವೆಚ್ಚ ನಿರೀಕ್ಷಕ ಆನಂದ್ ರಾಜ್ ಅವರ ಉಪಸ್ಥಿತಿಯಲ್ಲಿ ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು, ಪೆÇಲೀಸ್, ಅರಣ್ಯ ಇಲಾಖೆ ಮತ್ತು ಅಬಕಾರಿ ಇಲಾಖೆಗೆ ಸಂಬಂಧಪಟ್ಟ ಜಿಲ್ಲಾ ಮುಖ್ಯಸ್ಥರ ಸಭೆಯಲ್ಲಿ ಚುನಾವಣಾ ಚಟುವಟಿಕೆಗಳ ಬಗ್ಗೆ ಅವಲೋಕನ ನಡೆಸಿದರು.
ಈ ಸಂದರ್ಭ ಜಿಲ್ಲಾ ಚುನಾವಣಾಧಿಕಾರಿ ಕೆ. ಇನ್ಬಾಶೇಖರ್ ಜಿಲ್ಲೆಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.
ಪೆÇಲೀಸ್ ಚಟುವಟಿಕೆಗಳ ಬಗ್ಗೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪಿ.ಬಿಜೋಯ್, ಅರಣ್ಯ ಇಲಾಖೆಯಲ್ಲಿ ನಡೆಯುತ್ತಿರುವ ನಿರೀಕ್ಷಣಾ ಚಟುವಟಿಕೆಗಳ ಬಗ್ಗೆ ಜಿಲ್ಲಾ ಅರಣ್ಯಾಧಿಕಾರಿ ಕೆ.ಅಶ್ರಫ್ ಮತ್ತು ಅಬಕಾರಿ ಇಲಾಖೆ ವತಿಯಿಂದ ನಡೆಯುತ್ತಿರುವ ಕಾರ್ಯಾಚರಣೆಗಳ ಬಗ್ಗೆ ಅಬಕಾರಿ ಉಪ ಆಯುಕ್ತ ಪಿ.ಕೆ.ಜಯರಾಜ್ ಮಾಹಿತಿ ನೀಡಿದರು. ಎಡಿಎಂ ಕೆ.ವಿ.ಶ್ರುತಿ, ಅಪರ ಜಿಲ್ಲಾಧಿಕಾರಿ ಸುಫಿಯಾನ್ ಅಹಮ್ಮದ್, ಸಹಾಯಕ ಜಿಲ್ಲಾಧಿಕಾರಿ ದಿಲೀಪ್ ಕೆ.ಕೈನಿಕರ, ಚುನಾವಣಾ ಅಪರ ಜಿಲ್ಲಾಧಿಕಾರಿ ಪಿ.ಅಖಿಲ್, ಸಹಾಯಕ ಚುನಾವಣಾಧಿಕಾರಿಗಳಾದ ಪಿ.ಶಾಜು, ಪಿ.ಬಿನುಮೋನ್ ಮತ್ತು ರೀಟಾ ನಿರ್ಮಲ್ ಗೋಮ್ಸ್, ನೋಡಲ್ ಅಧಿಕಾರಿಗಳು ಮತ್ತು ಸಹಾಯಕ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲೆಯಲ್ಲಿ ಇದುವರೆಗೆ ನಡೆದಿರುವ ಚುನಾವಣಾ ಚಟುವಟಿಕೆಗಳ ಕುರಿತಾದ ವಿಡಿಯೋ ಪ್ರದರ್ಶಿಸಲಾಯಿತು. ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಸ್ವಾಗತಿಸಿದರು. ಉಪ ಜಿಲ್ಲಾಧಿಕಾರಿ ಸುಫಿಯಾನ್ ಅಹಮ್ಮದ್ ವಂದಿಸಿದರು.