ನವದೆಹಲಿ: ಎಎಪಿ ನಾಯಕ ಸಂಜಯ್ ಸಿಂಗ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಲೋಕಸಭೆ ಚುನಾವಣೆಗೆ ಇಂಡಿಯಾ ಬಣದಿಂದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವ ಕುರಿತಂತೆ ಮಾತುಕತೆ ನಡೆಸಿದ್ದಾರೆ.
ನವದೆಹಲಿ: ಎಎಪಿ ನಾಯಕ ಸಂಜಯ್ ಸಿಂಗ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಲೋಕಸಭೆ ಚುನಾವಣೆಗೆ ಇಂಡಿಯಾ ಬಣದಿಂದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವ ಕುರಿತಂತೆ ಮಾತುಕತೆ ನಡೆಸಿದ್ದಾರೆ.
'ಲೋಕಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟ ಜಂಟಿಯಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಪ್ರಣಾಳಿಕೆ ಬಿಡುಗಡೆ ಮಾಡುವುದರ ಕುರಿತು ಪ್ರಸ್ತಾಪಿಸಿದ್ದೇನೆ ಎಂದರು.
'ಬಿಜೆಪಿಯು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳತ್ತಿದೆ. ತಿಹಾರ್ ಜೈಲಿನಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವುದರ ಕುರಿತು ಖರ್ಗೆ ಅವರೊಂದಿಗೆ ಚರ್ಚಿಸಲಾಯಿತು ಎಂದು ಸಿಂಗ್ ಹೇಳಿದ್ದಾರೆ.
ಸಂಜಯ್ ಸಿಂಗ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಫೋಟೊಗಳನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧಿತ ದೆಹಲಿ ಸಿಎಂ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿದೆ ಎಂದು ಸಿಂಗ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದರು.