ನವದೆಹಲಿ: ಚಂಡಮಾರುತದಿಂದಾಗಿ ಉಂಟಾಗಿರುವ ಹಾನಿ ಕುರಿತು ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಮಣಿಪುರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ನೆರವಿನ ಭರವಸೆ ನೀಡಿದ್ದಾರೆ.
ನವದೆಹಲಿ: ಚಂಡಮಾರುತದಿಂದಾಗಿ ಉಂಟಾಗಿರುವ ಹಾನಿ ಕುರಿತು ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಮಣಿಪುರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ನೆರವಿನ ಭರವಸೆ ನೀಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ 5 ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಲ್ಮಾರಾ-ಮಂಕಚಾರ್ ಜಿಲ್ಲೆಯ ಬ್ರಹ್ಮಪುತ್ರ ನದಿಯಲ್ಲಿ ದೋಣಿ ಮುಳುಗಿ ಮಗು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಅಸ್ಸಾಂ ಮತ್ತು ಮಣಿಪುರದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಕಟ್ಟಡಗಳ ಕುಸಿತ ಸೇರಿದಂತೆ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.
ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅಮಿತ್ ಶಾ, ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.