ಮುಂಬೈ: ಸಂವಿಧಾನದ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯಗಳು ಮುಖ್ಯವೆನಿಸುವುದಿಲ್ಲ. ಸಂವಿಧಾನವನ್ನು ಬದಲಾಯಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಚವ್ಹಾಣ್ ತಿಳಿಸಿದ್ದಾರೆ.

ನಾಂದೇಡ್‌ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪಕ್ಷದ ನಾಯಕ ಮತ್ತು ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಅವರು ದೇಶದ ಸಂವಿಧಾನ ಬದಲಾಯಿಸುವ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಉಲ್ಲೇಖಿಸಿ, ಸಂವಿಧಾನದ ವಿಷಯದಲ್ಲಿ ವ್ಯಕ್ತಿಯ ವೈಯಕ್ತಿಕ ಅಭಿಪ್ರಾಯಕ್ಕಿಂತ ಪಕ್ಷದ ಉನ್ನತ ನಾಯಕರು ಏನು ಹೇಳುತ್ತಾರೆ ಎಂಬುದು ಮುಖ್ಯವಾಗಿದೆ' ಎಂದು ಹೇಳಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅನಂತ್ ಕುಮಾರ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಕ್ಕಿಲ್ಲ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಲಾಗಿದೆ ಎಂದು ಚವ್ಹಾಣ್ ತಿಳಿಸಿದ್ದಾರೆ.
ಸಂವಿಧಾನದಲ್ಲಿ ತಿದ್ದುಪಡಿ ತರಲು ಈ ಬಾರಿಯ ಲೋಕಸಭೆ ಮತ್ತು ರಾಜ್ಯಸಭೆ ಚುನಾವಣೆಗಳಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಗಳಿಸುವ ಮೂಲಕ 20 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಅವರು ಕಳೆದ ತಿಂಗಳು ಹೇಳಿಕೆ ನೀಡಿದ್ದರು.
ನಾಳೆ (ಶುಕ್ರವಾರ) ಮಹಾರಾಷ್ಟ್ರದ ಇತರ ಏಳು ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.