ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ-2024 (ಸಿಎಎ) ನಿಯಮಗಳನ್ನು ಪ್ರಶ್ನಿಸಿ ಹೊಸದಾಗಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಹಾಗೂ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ-2024 (ಸಿಎಎ) ನಿಯಮಗಳನ್ನು ಪ್ರಶ್ನಿಸಿ ಹೊಸದಾಗಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಹಾಗೂ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.
ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಜೆ.ಬಿ.ಪಾರ್ದೀವಾಲಾ ಅವರಿದ್ದ ನ್ಯಾಯಪೀಠ, ಅಸ್ಸಾಂ ಸರ್ಕಾರ, ಗೃಹ ಮತ್ತು ವಿದೇಶಾಂಗ ಸಚಿವಾಲಯಗಳಿಗೆ ನೋಟಿಸ್ ಜಾರಿ ಮಾಡಿತು.
ಇದೇ ವಿಷಯ ಕುರಿತು ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳೊಂದಿಗೆ ಈ ಹೊಸ ಅರ್ಜಿ ಸೇರಿಸುವಂತೆಯೂ ನ್ಯಾಯಪೀಠ ಆದೇಶಿಸಿತು.
ಗುವಾಹಟಿ ನಿವಾಸಿ ಹೀರೇನ್ ಗೋಹೇನ್ ಎಂಬುವವರು ಈ ಕುರಿತು ಅರ್ಜಿ ಸಲ್ಲಿಸಿದ್ದಾರೆ.
'ಸಿಎಎ ನಿಯಮಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ. ಅವು ತಾರತಮ್ಯ ಧೋರಣೆ ಮತ್ತು ಸ್ವೇಚ್ಛೆಯಿಂದ ಕೂಡಿದ್ದು, ಕಾನೂನುಬಾಹಿರ ಸಹ ಆಗಿವೆ. ಜೊತೆಗೆ, ಸಂವಿಧಾನದ ಮೂಲ ರಚನೆಗೂ ವಿರುದ್ಧವಾಗಿವೆ' ಎಂದು ಗೋಹೇನ್ ಅರ್ಜಿಯಲ್ಲಿ ಹೇಳಿದ್ದಾರೆ.