ನವದೆಹಲಿ: ಯೋಜಿತ ಒತ್ತಡ, ತಪ್ಪು ಮಾಹಿತಿ ಮತ್ತು ಸಾರ್ವಜನಿಕ ಅವಹೇಳನದ ಮೂಲಕ ನ್ಯಾಯಾಂಗವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು 21 ಮಂದಿ ನಿವೃತ್ತ ನ್ಯಾಯಮೂರ್ತಿಗಳ ಗುಂಪು ಸಿಜೆಐ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದೆ.
ನವದೆಹಲಿ: ಯೋಜಿತ ಒತ್ತಡ, ತಪ್ಪು ಮಾಹಿತಿ ಮತ್ತು ಸಾರ್ವಜನಿಕ ಅವಹೇಳನದ ಮೂಲಕ ನ್ಯಾಯಾಂಗವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು 21 ಮಂದಿ ನಿವೃತ್ತ ನ್ಯಾಯಮೂರ್ತಿಗಳ ಗುಂಪು ಸಿಜೆಐ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದೆ.
ಈ ಟೀಕೆಗಳು ಸಂಕುಚಿತ ರಾಜಕೀಯ ಹಿತಾಸಕ್ತಿ ಹಾಗೂ ವೈಯಕ್ತಿಕ ಲಾಭಕ್ಕಾಗಿ ಮಾಡಲಾಗುತ್ತಿದ್ದು, ನ್ಯಾಯಾಂಗದ ಬಗ್ಗೆ ಸಾರ್ವಜನಿಕರಿಗೆ ಇರುವ ನಂಬಿಕೆಯನ್ನು ತೊಡೆದುಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪತ್ರ ಬರೆದವರ ಪೈಕಿ 4 ಮಂದಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಿದ್ದು, ಈ ಪತ್ರ ಬರೆಯಲು ಕಾರಣವಾದ ಯಾವುದೇ ಘಟನೆಯನ್ನು ಉಲ್ಲೇಖಿಸಿಲ್ಲ.
ಪತ್ರ ಬರೆದವರಲ್ಲಿ ನಿವೃತ್ತ ನ್ಯಾಯಮೂರ್ತಿಗಳಾದ ದೀಪಕ್ ವರ್ಮಾ, ಕೃಷ್ಣ ಮುರಾರಿ, ದಿನೇಶ್ ಮಾಹೇಶ್ವರಿ ಮತ್ತು ಎಂ ಆರ್ ಶಾ ಸೇರಿದ್ದಾರೆ.
ನ್ಯಾಯಾಲಯಗಳು ಮತ್ತು ನ್ಯಾಯಾಧೀಶರ ಸಮಗ್ರತೆಯ ಬಗ್ಗೆ ಅಪಶಬ್ದಗಳನ್ನು ಹೇಳುವ ಮೂಲಕ ನ್ಯಾಯಾಂಗ ಪ್ರಕ್ರಿಯೆಗಳನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಇಂತಹ ಕ್ರಮಗಳು ನಮ್ಮ ನ್ಯಾಯಾಂಗದ ಪಾವಿತ್ರ್ಯಕ್ಕೆ ಧಕ್ಕೆ ತರುವುದಲ್ಲದೆ, ನ್ಯಾಯಾಂಗದ ಪಾಲಕರಾದ ನ್ಯಾಯಾಧೀಶರು ಎತ್ತಿಹಿಡಿಯಲು ಪ್ರಮಾಣ ಮಾಡಿದ ನ್ಯಾಯಸಮ್ಮತತೆ ಮತ್ತು ನಿಷ್ಪಕ್ಷಪಾತದ ತತ್ವಗಳಿಗೆ ನೇರ ಸವಾಲನ್ನು ಒಡ್ಡುತ್ತದೆ ಎಂದು 'ಅನಗತ್ಯ ಒತ್ತಡಗಳಿಂದ ನ್ಯಾಯಾಂಗವನ್ನು ರಕ್ಷಿಸುವ ಅಗತ್ಯವಿದೆ' ಎಂಬ ಶೀರ್ಷಿಕೆ ಇರುವ ಪತ್ರದಲ್ಲಿ ತಿಳಿಸಿದ್ದಾರೆ.