ತಿರುವನಂತಪುರ: ರಾಷ್ಟ್ರಪ್ರಶಸ್ತಿ ವಿಜೇತೆ ಚಿತ್ರನಟಿ ಹಾಗೂ ಭರತನಾಟ್ಯ ಕಲಾವಿದೆ ಶೋಭನಾ ಅವರು, ತಿರುವನಂತಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರಿಗೆ ಬೆಂಬಲ ಸೂಚಿಸಿದರು.
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಶೋಭನಾ, 'ಚಂದ್ರಶೇಖರ್ ಅವರಿಗೆ ಬೆಂಬಲ ನೀಡುವ ಮೂಲಕ ಈ ಬಾರಿಯ ವಿಷು ಹಬ್ಬ ನನಗೆ ವಿಶೇಷವಾಗಿದೆ. ಅವರಿಗೆ ಶುಭ ಕೋರುತ್ತೇನೆ' ಎಂದು ಹೇಳಿದರು.
'ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನಡೆಸಲಿರುವ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ' ಎಂದೂ ತಿಳಿಸಿದರು.
'ನಟಿ ಶೋಭನಾ ಅವರು ಬೆಂಬಲ ನೀಡಿರುವುದು ಖುಷಿ ತಂದಿದೆ. ಪ್ರಗತಿ ಮತ್ತು ಅಭಿವೃದ್ಧಿಯ ಪರ ಇರುವವರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ' ಎಂದು ರಾಜೀವ್ ಚಂದ್ರಶೇಖರ್ ಹೇಳಿದರು.
ಚಂದ್ರಶೇಖರ್ ಅವರು ಕಾಂಗ್ರೆಸ್‌ನ ಶಶಿ ತರೂರ್ ಮತ್ತು ಸಿಪಿಐನ ಪನ್ಯನ್ ರವೀಂದ್ರನ್ ಅವರ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.