ವಂದೇ ಭಾರತ್ ರೈಲುಗಳ ಲಾಭಗದ ಬಗ್ಗೆ ರೈಲ್ವೆ ಸಚಿವಾಲಯ ಪ್ರತ್ಯೇಕ ದಾಖಲೆಗಳನ್ನು ಹೊಂದಿಲ್ಲ ಎಂದು ರೈಲ್ವೆ ಸಚಿವಾಲಯ ಆರ್ ಟಿಐ ಅರ್ಜಿಯೊಂದಕ್ಕೆ ಪ್ರತಿಕ್ರಿಯೆ ನೀಡಿದೆ.
ವಂದೇ ಭಾರತ್ ರೈಲುಗಳ ಲಾಭಗದ ಬಗ್ಗೆ ರೈಲ್ವೆ ಸಚಿವಾಲಯ ಪ್ರತ್ಯೇಕ ದಾಖಲೆಗಳನ್ನು ಹೊಂದಿಲ್ಲ ಎಂದು ರೈಲ್ವೆ ಸಚಿವಾಲಯ ಆರ್ ಟಿಐ ಅರ್ಜಿಯೊಂದಕ್ಕೆ ಪ್ರತಿಕ್ರಿಯೆ ನೀಡಿದೆ.
2019 ರ ಫೆ.15 ರಂದು ದೇಶದ ಮೊದಲ ಸೆಮಿ-ಹೈ-ಸ್ಪೀಡ್ ರೈಲನ್ನು ನವದೆಹಲಿ-ವಾರಾಣಸಿ ನಡುವೆ ಲೋಕಾರ್ಪಣೆಗೊಳಿಸಲಾಯಿತು. ಇಂದಿಗೆ 100 ಮಾರ್ಗಗಳಲ್ಲಿ 102 ವಂದೇ ಭಾರತ್ ರೈಲುಗಳು ಸಂಚರಿಸುತ್ತಿದ್ದು, 284 ಜಿಲ್ಲೆಗಳು, 24 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ವ್ಯಾಪಿಸಿದೆ.
ಮೊದಲ ಬಾರಿ ಲೋಕಾರ್ಪಣೆಯಾದಾಗಿನಿಂದ ವಂದೇ ಭಾರತ್ ರೈಲಿನಲ್ಲಿ 2 ಕೋಟಿ ಮಂದಿ ಪ್ರಯಾಣಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 2023-24ರ ಹಣಕಾಸು ವರ್ಷದಲ್ಲಿ ವಂದೇ ಭಾರತ್ ರೈಲುಗಳು ಕ್ರಮಿಸಿದ ದೂರವು ಭೂಮಿಯ 310 ಸುತ್ತುಗಳನ್ನು ತೆಗೆದುಕೊಂಡಿದ್ದಕ್ಕೆ ಸಮಾನವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.