ಸಮರಸ ಚಿತ್ರಸುದ್ದಿ: ಕುಂಬಳೆ: 2023-24 ನೆಯ ಸಾಲಿನ ಕೇರಳ ರಾಜ್ಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಎಲ್ಲಾ ವಿದ್ಯಾರ್ಥಿಗಳು ಯಾವುದೇ ಗ್ರೇಸ್ ಮಾರ್ಕ್ ಇಲ್ಲದೆ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡು ಶಾಲೆಗೆ ಹಾಗೂ ಹೆತ್ತವರಿಗೆ ಕೀರ್ತಿ ತಂದಿರುತ್ತಾರೆ. ಶಾಲೆಯ ಹೆಮ್ಮೆಯ ಸಾಧಕ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಆಡಳಿತ ಮಂಡಳಿ, ಹಾಗೂ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿರುತ್ತಾರೆ.