ಮೆಲ್ಬರ್ನ್: ಪಪುವಾ ನ್ಯೂಗಿನಿಯಲ್ಲಿ ಶುಕ್ರವಾರ ಸಂಭವಿಸಿದ ಭೂ ಕುಸಿತದಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಆಸ್ಟ್ರೇಲಿಯಾ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಎಬಿಸಿ) ವರದಿ ಮಾಡಿದೆ.
ಮೆಲ್ಬರ್ನ್: ಪಪುವಾ ನ್ಯೂಗಿನಿಯಲ್ಲಿ ಶುಕ್ರವಾರ ಸಂಭವಿಸಿದ ಭೂ ಕುಸಿತದಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಆಸ್ಟ್ರೇಲಿಯಾ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಎಬಿಸಿ) ವರದಿ ಮಾಡಿದೆ.
ಎಂಗಾ ಪ್ರಾಂತ್ಯದ ಕಾವೊಕಲಮ್ ಗ್ರಾಮದಲ್ಲಿ ಬೆಳಿಗ್ಗೆ 3ಕ್ಕೆ ಭೂ ಕುಸಿತ ಸಂಭವಿಸಿದೆ.
ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿರಬಹುದು ಎಂದು ಅಲ್ಲಿನ ನಿವಾಸಿಗಳು ಹೇಳೀದ್ದಾರೆ. ಆದರೆ, ಅಧಿಕಾರಿಗಳು ಅದನ್ನು ಖಚಿತಪಡಿಸಿಲ್ಲ. ನೆಲದಲ್ಲಿ ಹೂತುಹೋಗಿರುವ ಶವಗಳನ್ನು ಜನರು ಹೊರತೆಗೆಯುತ್ತಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
800ಕ್ಕೂ ಹೆಚ್ಚು ಭಾಷೆ ಮಾತನಾಡುವ ಜನರಿರುವ ಪಪುವಾ ನ್ಯೂಗಿನಿ, ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಇಲ್ಲಿ 1 ಕೋಟಿಗೂ ಹೆಚ್ಚು ಜನರು ನೆಲೆಸಿದ್ದಾರೆ. 2.7 ಕೋಟಿ ಜನಸಂಖ್ಯೆ ಹೊಂದಿರುವ ಆಸ್ಟ್ರೇಲಿಯಾವನ್ನು ಬಿಟ್ಟರೆ, ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದಕ್ಷಿಣ ಪೆಸಿಫಿಕ್ ರಾಷ್ಟ್ರ ಇದಾಗಿದೆ.