HEALTH TIPS

ಮಿಜೋರಾಂ : ಕ್ವಾರಿ ಕುಸಿತ: 10 ಸಾವು, ಹಲವರು ನಾಪತ್ತೆ

          ಜ್ವಾಲ್: ಮಿಜೋರಾಂ ರಾಜ್ಯದ ರಾಜಧಾನಿ ಐಜ್ವಾಲ್‌ನಲ್ಲಿ ಮಂಗಳವಾರ ಬೆಳಿಗ್ಗೆ ಕಲ್ಲಿನ ಕ್ವಾರಿ ಕುಸಿದು 10 ಜನ ಸಾವನ್ನಪ್ಪಿದ್ದು ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

            ನಿರಂತರ ಮಳೆಯ ಪರಿಣಾಮ ಈ ಕ್ವಾರಿ ಕುಸಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ನಗರದ ದಕ್ಷಿಣ ಹೊರವಲಯದಲ್ಲಿರುವ ಮೆಲ್ಥಮ್ ಪ್ರದೇಶದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

               10 ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನಿರೀಕ್ಷಿಸಲಾಗುತ್ತಿದೆ...


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries