ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ವಿವಿಧೆಡೆ ಗುರುವಾರ ಮಧ್ಯಾಹ್ನ ಸಿಡಿಲು ಬಡಿದು 11 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ: ಮಾಲ್ಡಾ ಜಿಲ್ಲೆಯಲ್ಲಿ ಸಿಡಿಲು ಬಡಿದು 11 ಮಂದಿ ಸಾವು
0
ಮೇ 17, 2024
Tags
ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ವಿವಿಧೆಡೆ ಗುರುವಾರ ಮಧ್ಯಾಹ್ನ ಸಿಡಿಲು ಬಡಿದು 11 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರವನ್ನು ಜಿಲ್ಲಾಡಳಿತ ಘೋಷಿಸಿದೆ.
'ಸಿಡಿಲು ಬಡಿದು ಈವರೆಗೆ ಜಿಲ್ಲೆಯಲ್ಲಿ 11 ಮಂದಿ ಮೃತಪಟ್ಟಿದ್ದು, ಗಾಯಗೊಂಡ ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಂದನ್ ಸಹಾನಿ (40),ರಾಜ್ ಮೃದ್ಧಾ(16) ಮತ್ತು ಮನಜಿತ್ ಮಂಡಲ್(21) ಆಸಿಟ್ ಸಹಾ(19) ಶಹಾಪುರ್ ಪ್ರದೇಶದಲ್ಲಿ ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಹರಿಶ್ಚಂದ್ರಪುರದ 8 ವರ್ಷದ ಬಾಲಕ ರಾಣಾ ಶೇಖ್, ನಯನ್ ರಾಯ್(23), ಪ್ರಿಯಾಂಕಾ ಸಿಂಘ(20), ಅತುಲ್ ಮಂಡಲ್(65), ಶೇಖ್ ಸಬ್ರುಲ್(11) ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ.