HEALTH TIPS

ಟರ್ಬುಲೆನ್ಸ್‌ಗೆ ಸಿಲುಕಿದ ಕತಾರ್ ಏರ್‌ವೇಸ್ ವಿಮಾನ: 12 ಮಂದಿಗೆ ಗಾಯ

            ಲಂಡನ್: ಭಾನುವಾರ ದೋಹಾದಿಂದ ಡಬ್ಲಿನ್‌ಗೆ ತೆರಳುತ್ತಿದ್ದ ಕತಾರ್ ಏರ್‌ವೇಸ್ ವಿಮಾನ ಟರ್ಬುಲೆನ್ಸ್‌ಗೆ (ಗಾಳಿಯ ಏರುಪೇರಿನಿಂದ ಆಗುವ ಕ್ಷೋಭೆ) ಸಿಲುಕಿ 12 ಜನ ಗಾಯಗೊಂಡಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

           6 ಪ್ರಯಾಣಿಕರು ಮತ್ತು 6 ಸಿಬ್ಬಂದಿಯಿದ್ದ ವಿಮಾನವು ಟರ್ಕಿಗೆ ಸಾಗುತ್ತಿದ್ದಾಗ ತೀವ್ರ ಟರ್ಬುಲೆನ್ಸ್‌ಗೆ ತುತ್ತಾಗಿದೆ.

           ಈ ವೇಳೆ 12 ಮಂದಿಗೆ ಗಾಯಗಳಾಗಿವೆ ಎಂದು ಡಬ್ಲಿನ್ ವಿಮಾನ ನಿಲ್ದಾಣ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

            ವಿಮಾನ ಸುರಕ್ಷಿತವಾಗಿ ಇಳಿದ ಬಳಿಕ ವಿಮಾನ ನಿಲ್ದಾಣದ ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸೇರಿದಂತೆ ತುರ್ತು ಸೇವೆಗಳು ಪ್ರಯಾಣಿಕರಿಗೆ ನೆರವಾದರು. ಬಳಿಕ 8 ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

          'ವಿಮಾನದಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಕತಾರ್ ಏರ್‌ವೇಸ್ ತಿಳಿಸಿದೆ.

               ಕಳೆದ 5 ದಿನಗಳ ಹಿಂದೆ ಸಿಂಗಪುರ ಏರ್‌ಲೈನ್ಸ್ ಕಂಪನಿಯ ವಿಮಾನವೊಂದು ಹಿಂದೂ ಮಹಾಸಾಗರದ ಮೇಲೆ ಸಾಗುತ್ತಿದ್ದಾಗ ತೀವ್ರ ಟರ್ಬುಲೆನ್ಸ್‌ಗೆ ಸಿಲುಕಿ, ಮೂರೇ ನಿಮಿಷಗಳ ಅವಧಿಯಲ್ಲಿ ಆರು ಸಾವಿರ ಅಡಿಗಳಷ್ಟು ಕೆಳಕ್ಕೆ ಕುಸಿದಿತ್ತು. ಇದರ ಪರಿಣಾಮವಾಗಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬ್ರಿಟನ್‌ ಪ್ರಜೆಯೊಬ್ಬರು ಮೃತಪಟ್ಟಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries