ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 14 ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಭಾನುವಾರ ಈ ವಿಷಯ ತಿಳಿಸಿದ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ, ಮೇ 13 ರಂದು ಮೋದಿ ಅವರು ಕ್ಷೇತ್ರದಲ್ಲಿ ರೋಡ್‌ಶೋ ನಡೆಸಲಿದ್ದು, ಅದಕ್ಕೆ ಸಿದ್ಧತೆಗಳು ನಡೆಯುತ್ತಿರುವುದಾಗಿ ತಿಳಿಸಿದರು.
"ರೋಡ್‌ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ, ಮೇ 14 ರಂದು ಪ್ರಧಾನಿ ಮೋದಿ ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ" ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.
ವಾರಣಾಸಿಯಲ್ಲಿ ಕಾಂಗ್ರೆಸ್ ತನ್ನ ಉತ್ತರ ಪ್ರದೇಶದ ಮುಖ್ಯಸ್ಥ ಅಜಯ್ ರೈ ಮತ್ತು ಬಿಎಸ್ ಪಿ ಅಥರ್ ಜಮಾಲ್ ಲಾರಿ ಅವರನ್ನು ಕಣಕ್ಕಿಳಿಸಿದೆ.
ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಮತ್ತು ಕೊನೆಯ ಸುತ್ತಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಚುನಾವಣೆ ನಡೆಯಲಿದೆ.