HEALTH TIPS

17ರ ಬಾಲಕನಿಗೆ ಮದ್ಯ ಪೂರೈಸಿದ್ದ ಎರಡು ರೆಸ್ಟೋರೆಂಟ್‌ಗಳಿಗೆ ಬೀಗ

          ಪುಣೆ: 17 ವರ್ಷದ ಬಾಲಕನೊಬ್ಬ ಮದ್ಯದ ನಶೆಯಲ್ಲಿ ವಿಲಾಸಿ ಕಾರು 'ಪೋಶೆ' ಚಾಲನೆ ಮಾಡಿ ಇಬ್ಬರು ಟೆಕಿಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ, ಬಾಲಕನಿಗೆ ಮದ್ಯ ಪೂರೈಸಿದ್ದ ಎರಡು ರೆಸ್ಟೋರೆಂಟ್‌ಗಳಿಗೆ ಬೀಗ ಜಡಿಯಲಾಗಿದೆ.

        ಪುಣೆ ಜಲ್ಲಾಧಿಕಾರಿಯ ಆದೇಶದ ಮೇರೆಗೆ ಮಹಾರಾಷ್ಟ್ರದ ಅಬಕಾರಿ ಇಲಾಖೆಯು ಕ್ರಮ ಕೈಗೊಂಡಿದೆ. ಕೋಸಿ ರೆಸ್ಟೋರೆಂಟ್ ಮತ್ತು ಹೋಟೆಲ್ ಬ್ಲಾಕ್ ಕ್ಲಬ್‌ಗೆ ಬೀಗ ಜಡಿಯಲಾಗಿದೆ.

             ಬಾಲಕ ತಮ್ಮ ಗೆಳೆಯರೊಂದಿಗೆ ಶನಿವಾರ ರಾತ್ರಿ 9.30ರಿಂದ ಮಧ್ಯರಾತ್ರಿ 1ರ ನಡುವೆ ರೆಸ್ಟೋರೆಂಟ್‌ಗೆ ತೆರಳಿ ಮದ್ಯಪಾನ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ತಾಪ್ತರಿಗೆ ಮದ್ಯ ಪೂರೈಸುವುದನ್ನು ತಡೆಯಲು ಅಬಕಾರಿ ಇಲಾಖೆಯು ವಿಶೇಷ ತಪಾಸಣಾ ಅಭಿಯಾನವನ್ನು ಪ್ರಾರಂಭಿಸಿದೆ. ನಿಯಮ ಉಲ್ಲಂಘನೆಯಾದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಿದ್ದು, ಪರವಾನಗಿ ರದ್ದುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

                ಪುಣೆ ನಗರದ ಕಲ್ಯಾಣಿನಗರ ಪ್ರದೇಶದಲ್ಲಿ ಭಾನುವಾರ ನಸುಕಿನಲ್ಲಿ ಪಾನಮತ್ತ 17ರ ಹರೆಯದ ಬಾಲಕ ಪೋಶೆ ಕಾರು ಚಲಾಯಿಸುತ್ತಿದ್ದಾಗ ಅದು ಬೈಕಿಗೆ ಡಿಕ್ಕಿ ಹೊಡೆದಿತ್ತು. ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮಧ್ಯಪ್ರದೇಶದ ಸಾಫ್ಟ್‌ವೇರ್‌ ತಂತ್ರಜ್ಞರಾದ 24 ವರ್ಷ ವಯಸ್ಸಿನ ಅನಿಸ್ ಅವಾಧಿಯ, ಅಶ್ವಿನಿ ಕಾಸ್ಟಾ ಮೃತಪಟ್ಟಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries